ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿನ ಗಾರ್ಮೆಂಟ್ ಕಾರ್ಖಾನೆ ಮತ್ತು ರಾಸಾಯನಿಕ ಸಂಗ್ರಹಾಗಾರದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಕಾರ್ಮಿಕರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ.
ಮೊದಲಿಗೆ ರಾಸಾಯನಿಕ ಸಂಗ್ರಹಾಗಾರದಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಅದು ಗಾರ್ಮೆಂಟ್ ಕಾರ್ಖಾನೆಗೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಗಾರ್ಮೆಂಟ್‌ನ ಮೊದಲ ಮತ್ತು ಎರಡನೇ ಮಹಡಿಗಳಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ನಾಗರಿಕ ರಕ್ಷಣಾ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಲೆಫ್ಟಿನೆಂಟ್ ಕರ್ನಲ್ ಮಹಮ್ಮದ್ ತಾಜುಲ್ ಇಸ್ಲಾಂ ಚೌಧರಿ ತಿಳಿಸಿದರು.
ವಿಷಯುಕ್ತ ಗಾಳಿ ಸೇವಿಸಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.
ಬೆಂಕಿ ನಿಯಂತ್ರಣದಲ್ಲಿದ್ದು, ಶೋಧವನ್ನು ಮುಂದುವರಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.