ADVERTISEMENT

ಬಾಂಗ್ಲಾ ಪ್ರವಾಹ: ಸಂಕಷ್ಟದಲ್ಲಿ 20 ಲಕ್ಷ ಜನ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 19:45 IST
Last Updated 17 ಜೂನ್ 2022, 19:45 IST
   

ಸಿಲ್ಹೆಟ್‌ (ಬಾಂಗ್ಲಾದೇಶ): ಸತತ ಸುರಿಯುತ್ತಿರುವ ಮುಂಗಾರು ಮಳೆಯಿಂದ ತತ್ತರಿಸಿರುವ ಬಾಂಗ್ಲಾದೇಶದಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ರಕ್ಷಣೆಗೆ ಬಾಂಗ್ಲಾ ಸರ್ಕಾರ ಸೇನಾ ಪಡೆಗಳನ್ನುರವಾನಿಸಿದೆ.

ದೇಶದ ಈಶಾನ್ಯ ಭಾಗವು ಬಹುತೇಕ ನೀರಿನಿಂದ ಆವೃತ್ತವಾಗಿದೆ. ವಾರಾಂತ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಮೂಲಗಳು
ಹೇಳಿದ್ದಾರೆ.

ತೀವ್ರ ಮಳೆಯ ಕಾರಣ ಬಾಂಗ್ಲಾ ದೇಶದಾದ್ಯಂತ ಪ್ರೌಢಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ತರಗತಿ ಕೊಠಡಿಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯವನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿ
ಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.