ADVERTISEMENT

ಬಾಂಗ್ಲಾದೇಶ: ‘ವಿಜಯ ದಿವಸ’ ಆಚರಣೆ

ಪಿಟಿಐ
Published 16 ಡಿಸೆಂಬರ್ 2019, 19:45 IST
Last Updated 16 ಡಿಸೆಂಬರ್ 2019, 19:45 IST
ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಶೇಖ್‌ ಹಸೀನಾ ಅವರು ಗೌರವ ಸಲ್ಲಿಸಿದರು–ಎಎಫ್‌ಪಿ ಚಿತ್ರ
ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಶೇಖ್‌ ಹಸೀನಾ ಅವರು ಗೌರವ ಸಲ್ಲಿಸಿದರು–ಎಎಫ್‌ಪಿ ಚಿತ್ರ   

ಢಾಕಾ: ಪಾಕಿಸ್ತಾನದಿಂದ ವಿಮೋಚನೆಗೊಂಡು ಸ್ವತಂತ್ರ ದೇಶವಾಗಿ ರಚನೆಯಾದ ಸ್ಮರಣಾರ್ಥ ಬಾಂಗ್ಲಾದೇಶದಲ್ಲಿ ಸೋಮವಾರ 49ನೇ ‘ವಿಜಯ ದಿವಸ’ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸೇನಾ ಶಕ್ತಿ ಪ್ರದರ್ಶನ ಹಾಗೂ ಪಥಸಂಚಲನ ನಡೆಯಿತು. ಭಾರತೀಯ ಸೇನೆಯ ಬ್ಯಾಂಡ್‌ ತಂಡವು ಮೊದಲ ಬಾರಿಗೆ ಈ ಪಥಸಂಚಲನದಲ್ಲಿ ಪಾಲ್ಗೊಂಡಿದೆ.

ಬಾಂಗ್ಲಾದೇಶದ ಅಧ್ಯಕ್ಷ ಎಂ. ಅಬ್ದುಲ್‌ ಹಮೀದ್‌, ಪ್ರಧಾನಿ ಶೇಖ್‌ ಹಸೀನಾ ಮತ್ತಿತರರು ಪಥಸಂಚಲನ ವೀಕ್ಷಿಸಿದರು.

ADVERTISEMENT

1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾರತೀಯ ಸೇನೆಯ ಕೊಡುಗೆಯನ್ನು ಕಾರ್ಯಕ್ರಮದ ನಿರೂಪಕರು ಸ್ಮರಿಸಿದಾಗ, ನೆರೆದಿದ್ದ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಭಾರತದ 20 ಮಂದಿ ಎನ್‌ಸಿಸಿ ಕೆಡೆಟ್‌ಗಳು, ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್‌ ಜನರಲ್ ರಾಜೀವ್‌ ಚೋಪ್ರಾ ಅವರೊಂದಿಗೆ ಪಥಸಂಚಲನ ವೀಕ್ಷಿಸಿದರು. ಬಾಂಗ್ಲಾದೇಶದಲ್ಲಿರುವ ಭಾರತದ ಹೈಕಮಿಷನರ್‌ ರಿವಾ ಗಂಗೂಲಿ ದಾಸ್‌ ಉಪಸ್ಥಿತರಿದ್ದರು.

ಯುದ್ಧ ವಿಮಾನ, ಹೆಲಿಕಾಪ್ಟರ್‌ಗಳ ಪ್ರದರ್ಶನ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.