ADVERTISEMENT

ಉಕ್ರೇನ್‌ನಲ್ಲಿ ನೆರವು: ಮೋದಿಗೆ ಕೃತಜ್ಞತೆ ಅರ್ಪಿಸಿದ ಬಾಂಗ್ಲಾ ಪ್ರಧಾನಿ ಹಸೀನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮಾರ್ಚ್ 2022, 5:48 IST
Last Updated 9 ಮಾರ್ಚ್ 2022, 5:48 IST
ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ –ಪಿಟಿಐ ಚಿತ್ರ
ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ –ಪಿಟಿಐ ಚಿತ್ರ    

ನವದೆಹಲಿ: ಉಕ್ರೇನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಬಾಂಗ್ಲಾದೇಶದ 9 ಮಂದಿಯನ್ನು ರಕ್ಷಣೆ ಮಾಡಿರುವುದಕ್ಕೆ ಪ್ರಧಾನಿ ಶೇಖ್ ಹಸೀನಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ‘ಆಪರೇಷನ್‌ ಗಂಗಾ’ ಕಾರ್ಯಾಚರಣೆ ಕೈಗೊಂಡಿದೆ.

ಈ ಕಾರ್ಯಾಚರಣೆಯ ಅಡಿಯಲ್ಲಿ ಬಾಂಗ್ಲಾ, ನೇಪಾಳ, ಟುನೀಶಿಯನ್ ವಿದ್ಯಾರ್ಥಿಗಳನ್ನು ಸಹ ರಕ್ಷಣೆ ಮಾಡಲಾಗಿದೆ ಎಂದು ಬಾಂಗ್ಲಾ ಸರ್ಕಾರದ ಮೂಲಗಳು ತಿಳಿಸಿವೆ.

ADVERTISEMENT

ಉಕ್ರೇನ್‌ ಗಡಿ ಭಾಗಕ್ಕೆ ತೆರಳಿ, ರೊಮೇನಿಯಾ ಪ್ರವೇಶಿಸಲು ಪಾಕಿಸ್ತಾನ ಸೇರಿದಂತೆ ಇತರೆ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಭಾರತದ ತ್ರಿವರ್ಣ ಧ್ವಜ ನೆರವಾಗಿರುವ ಕುರಿತು ವರದಿಯಾಗಿತ್ತು.

ರಷ್ಯಾದ ದಾಳಿಗೆ ಒಳಗಾಗಿರುವ ಉಕ್ರೇನ್‌ನಲ್ಲಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ವಿದ್ಯಾರ್ಥಿಗಳು ಸಂಕಷ್ಟಕ್ಕೆಸಿಲುಕಿದ್ದಾರೆ. ರಾಯಭಾರ ಕಚೇರಿಗಳ ಸಹಾಯದಿಂದ ವಿದ್ಯಾರ್ಥಿಗಳುಗಡಿ ಭಾಗಕ್ಕೆ ತೆರಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.