ADVERTISEMENT

ರೋಹಿಂಗ್ಯಾ ಮುಸ್ಲಿಮರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2019, 19:41 IST
Last Updated 14 ಮೇ 2019, 19:41 IST

ಕಾಕ್ಸ್‌ ಬಜಾರ್‌, ಬಾಂಗ್ಲಾದೇಶ (ರಾಯಿಟರ್ಸ್‌): ಮಲೇಷ್ಯಾಗೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ ರೋಹಿಂಗ್ಯಾ ಮುಸ್ಲಿಮರನ್ನು ಪೊಲೀಸರು ರಕ್ಷಿಸಿದ್ದಾರೆ.

43 ಮಹಿಳೆಯರು ಮತ್ತು 11 ಮಕ್ಕಳು ಸೇರಿದಂತೆ 69 ಮಂದಿಯನ್ನು ಹಡಗಿನ ಮೂಲಕ ಸಾಗಣೆ ಮಾಡಲಾಗುತ್ತಿತ್ತು.ಇಲ್ಲಿಯ ನಿರಾಶ್ರಿತರ ಶಿಬಿರದಲ್ಲಿದ್ದ ರೋಹಿಂಗ್ಯಾ ಮುಸ್ಲಿಮರಿಗೆ ಉದ್ಯೋಗ ನೀಡುವಆಮಿಷ ಒಡ್ಡಲಾಗಿತ್ತು.‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಎಲ್ಲರನ್ನೂ ರಕ್ಷಿಸಿ ಶಿಬಿರಕ್ಕೆ ಕಳುಹಿಸಲಾಗಿದೆ. ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

2017ರಲ್ಲಿ 7 ಲಕ್ಷ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾ ಗಡಿ ದಾಟಿ ಹೋಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.