ಢಾಕಾ: ಬಾಂಗ್ಲಾ ದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ನಿವಾಸವನ್ನು ಪ್ರತಿಭಟನಕಾರರು ಬುಧವಾರ ಧ್ವಂಸಗೊಳಿಸಲು ಯತ್ನಿಸಿದ್ದಾರೆ.
ಸದ್ಯ ಈ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಮಾಡಲಾಗಿದೆ.
ಶೇಖ್ ಹಸೀನಾ ಅವರು ಫೇಸ್‌ಬುಕ್ ಮೂಲಕ ತಮ್ಮ ಬೆಂಬಲಿಗರನ್ನು ಉದ್ಧೇಶಿಸಿ ಮಾತನಾಡುತ್ತಿದ್ದರು. ಇದನ್ನು ಪ್ರತಿಭಟಿಸಿ, ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಚಳವಳಿ (ಎಡಿಎಸ್‌ಎಂ) ಸಂಚಾಲಕ ಹಸ್ನತ್ ಅಬ್ದುಲ್ಲಾ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಆಗ, ಸುತ್ತಿಗೆಗಳೊಂದಿಗೆ ಕಟ್ಟಡದತ್ತ ನುಗ್ಗಿದ ಪ್ರತಿಭಟನಕಾರರು, ಅದನ್ನು ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಕೆಲವರು ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.