
ಢಾಕಾ: ಬಾಂಗ್ಲಾದೇಶದ ಶಾಲೆಯೊಂದರಲ್ಲಿ ಪ್ರಸಿದ್ಧ ಗಾಯಕ ಜೇಮ್ಸ್ ಅವರ ಕಾರ್ಯಕ್ರಮಕ್ಕೂ ಮುನ್ನ ನಡೆದ ದಾಳಿಯಲ್ಲಿ 20 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
‘ಫರೀದಪುರದಲ್ಲಿನ ಝಿಲ್ಲಾ ಶಾಲೆಯಲ್ಲಿ ಶುಕ್ರವಾರ ರಾತ್ರಿ 185ನೇ ವಾರ್ಷಿಕೋತ್ಸವ ನಡೆಯುತ್ತಿತ್ತು. ಈ ವೇಳೆ ದಾಳಿ ನಡೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಕಾರ್ಯಕ್ರಮ ಆರಂಭವಾಗುವ ಮೊದಲು ಬಲವಂತವಾಗಿ ಒಳನುಗ್ಗಲು ಬಂದ ಒಂದು ಗುಂಪನ್ನು ತಡೆಯಲಾಗಿತ್ತು. ಬಳಿಕ ಆ ಗುಂಪಿನವರು ಇಟ್ಟಿಗೆ ಮತ್ತು ಕಲ್ಲುಗಳನ್ನು ಎಸೆದು, ವೇದಿಕೆಯತ್ತೆ ನುಗ್ಗಲು ಮುಂದಾದರು. ಆಗ ಕೆಲ ವಿದ್ಯಾರ್ಥಿಗಳು ಅವರನ್ನು ತಡೆಯಲು ಪ್ರಯತ್ನಿಸಿದ್ದರು. ಈ ವೇಳೆ ಕಲ್ಲು ಮತ್ತು ಇಟ್ಟಿಗೆ ಬಿದ್ದು ಸುಮಾರು 20 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ’ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.
ಗಾಯಗೊಂಡವರ ನಿಖರ ಸಂಖ್ಯೆ ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಡಳಿತದ ಆದೇಶದಂತೆ ಜೇಮ್ಸ್ ಅವರ ಗಾಯನ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.
ಬಾಂಗ್ಲಾದೇಶದಲ್ಲಿ ಸಾಂಸ್ಕೃತಿಕ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನಡೆಸುವ ದಾಳಿಗಳು ಇತ್ತೀಚೆಗೆ ಹೆಚ್ಚಾಗಿವೆ.