
ಢಾಕಾ: ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿಗಳ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ, ಭಾರತದ ಹೈಕಮಿಷನರ್ ಪ್ರಣಯ್ ವರ್ಮ ಅವರಿಗೆ ಮಂಗಳವಾರ ಸಮನ್ಸ್ ನೀಡಿದೆ.
ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿ, ವೀಸಾ ಕೇಂದ್ರಗಳ ಎದುರು ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ಬಾಂಗ್ಲಾದೇಶ ಕಳವಳ ವ್ಯಕ್ತಪಡಿಸಿದೆ.
ಇಂಥ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಬಾಂಗ್ಲಾದೇಶದ ಹೈಕಮಿಷನ್ ಮತ್ತು ಇತರ ರಾಜತಾಂತ್ರಿಕ ಕಚೇರಿಗಳ ಭದ್ರತೆಗೆ ಕ್ರಮವಹಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿದೆ.
ಕಳೆದ 10 ದಿನಗಳಲ್ಲಿ ವರ್ಮಾ ಅವರಿಗೆ ಎರಡನೇ ಬಾರಿಗೆ ಸಮನ್ಸ್ ನೀಡಲಾಗಿದೆ.
ಪತ್ರಕರ್ತರ ಕಳವಳ: ಬಾಂಗ್ಲಾದೇಶದ ಮಾಧ್ಯಮಗಳು ಕಷ್ಟದ ಪರಿಸ್ಥಿತಿಯಲ್ಲಿವೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿಂತ ಜೀವಿಸುವ ಹಕ್ಕನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಬಾಂಗ್ಲಾದೇಶದ ಪ್ರಮುಖ ಪತ್ರಿಕೆಗಳ ಸಂಪಾದಕರು ಆತಂಕ ವ್ಯಕ್ತಪಡಿಸಿದ್ದಾರೆ.
ಬಾಕ್ಸ್
ಅಮೆರಿಕ ಸಂಸದರಿಂದ ಖಂಡನೆ
ನ್ಯೂಯಾರ್ಕ್/ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ಕೊಂದಿರುವುದನ್ನು ಅಮೆರಿಕ ಸಂಸದರು ಖಂಡಿಸಿದ್ದಾರೆ.
ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಮತ್ತು ಕಾನೂನು ಪುನರ್‌ಸ್ಥಾಪನೆ ಮಾಡುವಂತೆ ಬಾಂಗ್ಲಾದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಸದರಾದ ರಾಜಾ ಕೃಷ್ಣಮೂರ್ತಿ ಮತ್ತು ಜೆನಿಫೆರ್ ರಾಜ್‌ಕುಮಾರ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.