ADVERTISEMENT

ಮೀಸಲಾತಿ ವಿರುದ್ಧ ದಂಗೆ: ಬಾಂಗ್ಲಾದ ಶೇಖ್‌ ಹಸೀನಾಗೆ 6 ತಿಂಗಳ ಜೈಲು

ಪಿಟಿಐ
Published 2 ಜುಲೈ 2025, 11:18 IST
Last Updated 2 ಜುಲೈ 2025, 11:18 IST
ಶೇಖ್‌ ಹಸೀನಾ
ಶೇಖ್‌ ಹಸೀನಾ   

ಢಾಕಾ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಮೂವರು ನ್ಯಾಯಮೂರ್ತಿಗಳಿದ್ದ ನ್ಯಾಯಮಂಡಳಿಯ ಒಂದನೇ ಪೀಠವು ಈ ತೀರ್ಪು ನೀಡಿತು. 

ಸರ್ಕಾರಿ ಹುದ್ದೆಗಳ ಮೇಲಿನ ಮೀಸಲಾತಿಯನ್ನು ವಿರೋಧಿಸಿ ಸರ್ಕಾರದ ವಿರುದ್ಧ ಬಾಂಗ್ಲಾದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳು 11 ತಿಂಗಳ ಹಿಂದೆ ಭಾರಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಬಳಿಕ ಆ.5ರಂದು ಶೇಕ್‌ ಹಸೀನಾ ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನಗೈದರು. 

ADVERTISEMENT

ಇದಾದ ಬಳಿಕ ಹಸೀನಾ ಅವರಿಗೆ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.