ADVERTISEMENT

ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ರಾಜೀನಾಮೆ?

ಪಿಟಿಐ
Published 23 ಮೇ 2025, 2:59 IST
Last Updated 23 ಮೇ 2025, 2:59 IST
<div class="paragraphs"><p>ಮೊಹಮ್ಮದ್ ಯೂನಸ್</p></div>

ಮೊಹಮ್ಮದ್ ಯೂನಸ್

   

ಢಾಕಾ/ನವದೆಹಲಿ: ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರಲು ವಿಫಲವಾದ ಕಾರಣ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಯೂನಸ್ ಅವರು ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳೇ ರೂಪಿಸಿರುವ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಸಂಚಾಲಕ ನಹಿದ್ ಇಸ್ಲಾಂ ತಿಳಿಸಿರುವುದಾಗಿ ಬಿಬಿಸಿ ಬಾಂಗ್ಲಾ ವರದಿ ಮಾಡಿದೆ.

ADVERTISEMENT

‘ಇಂದು ಬೆಳಿಗ್ಗೆಯಿಂದ ಮೊಹಮ್ಮದ್ ಯೂನಸ್ ಅವರ ರಾಜೀನಾಮೆ ಸುದ್ದಿ ಕೇಳಿ ಬರುತ್ತಿದೆ. ಇದೇ ವಿಚಾರದ ಬಗ್ಗೆ ಚರ್ಚಿಸಲು ನಾನು ಅವರನ್ನು ಭೇಟಿ ಮಾಡಿದ್ದೆ. ಸದ್ಯದ ಪರಿಸ್ಥಿತಿಗೆ ಅಧರಿಸಿ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಅವರು ಹೇಳಿದರು’ ಎಂದು ನಹಿದ್ ಇಸ್ಲಾಂ ತಿಳಿಸಿದ್ದಾರೆ.

ದೇಶದ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಒಮ್ಮತಕ್ಕೆ ಬರದ ಹೊರತು ನಾನು ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಯೂನಸ್ ತಿಳಿಸಿರುವುದಾಗಿ ಎನ್‌ಸಿಪಿ ಸಂಚಾಲಕ ಹೇಳಿದರು.

ದೇಶದ ಭದ್ರತೆ ಮತ್ತು ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪಕ್ಷಗಳು ಒಗ್ಗಟ್ಟನ್ನು ಪ್ರದರ್ಶಿಸುವುದರ ಜತೆಗೆ ಸಹಕಾರ ನೀಡುವ ಭರವಸೆ ಇದೆ ಎಂದು ಯೂನಸ್ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.