ADVERTISEMENT

ಬೀಜಿಂಗ್‌ನಲ್ಲಿ ಭಾರಿ ಮಳೆ: 44 ಸಾವು, 9 ಮಂದಿ ನಾಪತ್ತೆ

ಪಿಟಿಐ
Published 31 ಜುಲೈ 2025, 12:19 IST
Last Updated 31 ಜುಲೈ 2025, 12:19 IST
   

ಬೀಜಿಂಗ್‌: ಭಾರಿ ಮಳೆಯಿಂದಾಗಿ ಬೀಜಿಂಗ್‌ನಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಕಳೆದ ಒಂದು ವಾರದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 44 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಮಿಯುನ್‌ ಹಾಗೂ ಯಾಂಕಿಂಗ್‌ ಜಿಲ್ಲೆಯಲ್ಲಿ ಈ ಸಾವುಗಳು ವರದಿಯಾಗಿವೆ. ನಾಪತ್ತೆಯಾಗಿರುವರ ಪತ್ತೆಗಾಗಿ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿರುವುದಾಗಿ ಅವರು ತಿಳಿಸಿದ್ದಾರೆ.

ಮಳೆಯ ತೀವ್ರತೆಗೆ ಬೀಜಿಂಗ್‌ನ ವಿವಿಧ ಜಿಲ್ಲೆಯ ಹಲವು ರಸ್ತೆಗಳು ಹಾನಿಗೊಳಗಾಗಿವೆ. 136 ಗ್ರಾಮಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.