ADVERTISEMENT

ಬೀಜಿಂಗ್‌: ಕೋವಿಡ್‌ ನಿರ್ಬಂಧ ಮತ್ತಷ್ಟು ಬಿಗಿ

ಏಜೆನ್ಸೀಸ್
Published 30 ಏಪ್ರಿಲ್ 2022, 13:50 IST
Last Updated 30 ಏಪ್ರಿಲ್ 2022, 13:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್‌: ಕೋವಿಡ್‌ನ ಹೊಸ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೀಜಿಂಗ್‌ನಲ್ಲಿ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಒಂದು ವಾರದ ಒಳಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಿಸಿದ ಪ್ರಮಾಣ ಪ‍ತ್ರ ಸಲ್ಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 5ರಿಂದ ನಗರದ ಯಾವುದೇ ಸಾರ್ವಜನಿಕ ಸ್ಥಳಕ್ಕೆ ಪ್ರವೇಶಿಸಲು ಅಥವಾ ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ ಮಾಡಲು ಬಯಸಿದರೆ ಒಂದು ವಾರದ ಒಳಗೆ ಪರೀಕ್ಷೆ ಮಾಡಿಸಿದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಚೀನಾ ಸರ್ಕಾರ ತಿಳಿಸಿದೆ.

ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ಚೀನಾದಲ್ಲಿ ಒಟ್ಟು 5 ದಿನ ಸಾರ್ವಜನಿಕ ರಜೆ ಇದೆ. ಈ ಸಂದರ್ಭದಲ್ಲಿ ಜನರ ಸಂಚಾರ ಹೆಚ್ಚಾದರೆ ಸೋಂಕು ಹೆಚ್ಚಾಗುವ ಆತಂಕವಿದೆ. ಹೀಗಾಗಿ ಮನೆಯಲ್ಲೇ ಉಳಿಯುವ ಸಾಧ್ಯತೆ ಇದೆ.

ADVERTISEMENT

ಕೊರೊನಾ: ಶಾಂಘೈನಲ್ಲಿ 47 ಮಂದಿ ಸಾವು

ಶಾಂಘೈ (ರಾಯಿಟರ್ಸ್‌): ಚೀನಾದ ವಾಣಿಜ್ಯ ರಾಜಧಾನಿ ಎಂದೇ ಹೆಸರಾದ ಶಾಂಘೈನಲ್ಲಿ ಶುಕ್ರವಾರ ಒಟ್ಟು 47 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.ಅಲ್ಲದೆ ಒಟ್ಟು 8,932 ಲಕ್ಷಣ ರಹಿತ ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂದು ಸರ್ಕಾರ ತಿಳಿಸಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.