ADVERTISEMENT

10 ತಿಂಗಳ ಬಳಿಕ ಭೂತಾನ್‌ನಲ್ಲಿ ಕೊರೊನಾ ವೈರಸ್‌ಗೆ ಮೊದಲ ಸಾವು

ಏಜೆನ್ಸೀಸ್
Published 8 ಜನವರಿ 2021, 10:55 IST
Last Updated 8 ಜನವರಿ 2021, 10:55 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಥಿಂಪು: ಭೂತಾನ್‌ನಲ್ಲಿ 10 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಕೊರೊನಾ ವೈರಸ್‌ನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.

34 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದು, ಥಿಂಪುವಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡಿ.23 ರಂದು ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ನೆರೆ ರಾಷ್ಟ್ರಗಳಾದ ಭಾರತ ಮತ್ತು ಚೀನಾದಿಂದ ಬರುವ ಪ್ರಯಾಣಿಕರ ವಿಮಾನಗಳನ್ನು ಕಳೆದ ಮಾರ್ಚ್‌ ತಿಂಗಳಿನಿಂದ ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ADVERTISEMENT

ವಿದೇಶದಿಂದ ಬಂದಿದ್ದ ಮಹಿಳೆಯೊಬ್ಬರಲ್ಲಿ ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸೆಂಬರ್‌ ತಿಂಗಳಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಜತೆಗೆ, ಸೋಂಕಿತ ಮಹಿಳೆಯ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು.

ಕೊರೊನಾ ವೈರಸ್‌ ಲಸಿಕೆಗಳು ಲಭ್ಯವಾಗುತ್ತಿದ್ದಂತೆ ಅವುಗಳನ್ನು ಸುರಕ್ಷಿತವಾಗಿರಿಸಲು ಭಾರತ ಮತ್ತು ಇತರೆ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.