ADVERTISEMENT

ಲಸಿಕೆ ಪಡೆಯದವರಲ್ಲಿ ಕೋವಿಡ್‌ ಸೋಂಕು ಹೆಚ್ಚು: ಜೋ ಬೈಡನ್‌

ಏಜೆನ್ಸೀಸ್
Published 17 ಜುಲೈ 2021, 8:57 IST
Last Updated 17 ಜುಲೈ 2021, 8:57 IST
ಜೋ ಬೈಡನ್‌
ಜೋ ಬೈಡನ್‌   

ವಾಷಿಂಗ್ಟನ್‌: ‘ಅಮೆರಿಕದಲ್ಲಿ ಮತ್ತೆ ಕೋವಿಡ್ ‍ಪ್ರಕರಣಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ’ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರುಗತಿ ಉಂಟಾಗಿದೆ. ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಲಸಿಕೆ ಪಡೆಯದಿರುವ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣುತ್ತಿದೆ. ಅವರೇ ಹೆಚ್ಚಾಗಿ ಸಾವಿಗೀಡಾಗುತ್ತಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಜನವರಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ. ಆದರೆ ಪರಿಸ್ಥಿತಿ ಬದಲಾಗಬಹುದು. ಮುಂಬರುವ ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಲಸಿಕೆ ಪಡೆಯದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ’ ಎಂದು ಬೈಡನ್‌ ಅವರು ಶುಕ್ರವಾರ ಹೇಳಿದರು.

9 ಕೋಟಿಗೂ ಹೆಚ್ಚು ಅರ್ಹ ಅಮೆರಿಕನ್ನರು ಇನ್ನೂ ಲಸಿಕೆ ಪಡೆದಿಲ್ಲ. ಕಡಿಮೆ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೊಂದಿರುವ ನಾಲ್ಕು ರಾಜ್ಯಗಳಲ್ಲಿ ಕಳೆದ ವಾರ ಶೇ 40ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ. ಫ್ಲಾರಿಡಾದಲ್ಲಿ ಅರ್ಧದಷ್ಟು ಹೊಸ ಪ್ರಕರಣಗಳು ಪತ್ತೆಯಾಗಿವೆ.

‘ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಬಗೆಗಿನ ಸುಳ್ಳು ಮಾಹಿತಿಗೆ ಹೆದರಿ ಜನರು ಲಸಿಕೆಯನ್ನು ಸ್ವೀಕರಿಸುತ್ತಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.