ADVERTISEMENT

ಅಮೆರಿಕ: ‘ಕೋವಿಡ್‌ 19‘ನಿಂದ ಮೃತಪಟ್ಟ 5 ಲಕ್ಷ ಮಂದಿಗೆ ಇಂದು ಶ್ರದ್ಧಾಂಜಲಿ

ಏಜೆನ್ಸೀಸ್
Published 22 ಫೆಬ್ರುವರಿ 2021, 5:38 IST
Last Updated 22 ಫೆಬ್ರುವರಿ 2021, 5:38 IST
ಜೋ ಬೈಡನ್
ಜೋ ಬೈಡನ್   

ವಾಷಿಂಗ್ಟನ್: ಕೋವಿಡ್‌ 19 ಸಾಂಕ್ರಾಮಿಕದಿಂದ ಮೃತಪಟ್ಟ 5 ಲಕ್ಷ ಮಂದಿಯ ಸ್ಮರಣಾರ್ಥ ಶ್ವೇತಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮೋಂಬತ್ತಿ ಬೆಳಗಿ, ಮೌನ ಆಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬೈಡನ್ ಅವರು ಕೊರೊನಾ ಸಾಂಕ್ರಾಮಿಕದಿಂದ ಮೃತಪಟ್ಟವರಿಗೆ ಗೌರವ ಸಲ್ಲಿಸಲಿದ್ದಾರೆ. ಬೈಡನ್ ಅವರೊಂದಿಗೆ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್, ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಮತ್ತು ಅವರ ಪತಿ ಡೌಗ್‌ ಎಂಮ್ಹಾಪ್‌ ಅವರು ಭಾಗವಹಿಸುತ್ತಿದ್ದಾರೆ.

ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಮೊದಲ ಬಾರಿಗೆ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ‘ಕೋವಿಡ್‌ 19‘ ಸಂಬಂಧಿ ಕಾರ್ಯಕ್ರಮದಲ್ಲಿ ಬೈಡನ್ ಪಾಲ್ಗೊಳ್ಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.