ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಕನಿಷ್ಠ ಏಳು ಯುದ್ಧಗಳನ್ನು ನಿಲ್ಲಿಸಿದ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡದಿದ್ದರೆ ಅದು ಅಮೆರಿಕಕ್ಕೆ ಮಾಡುವ ಅವಮಾನ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
ವರ್ಜೀನಿಯಾದ ಕ್ವಾಂಟಿಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ‘ಭಾರತ–ಪಾಕಿಸ್ತಾನ ಸೇರಿದಂತೆ ಈಗಾಗಲೇ ಏಳು ಜಾಗತಿಕ ಸಂಘರ್ಷಗಳನ್ನು ಪರಿಹರಿಸಲು ನಾನು ಸಹಾಯ ಮಾಡಿದ್ದೇನೆ. ಗಾಜಾದಲ್ಲಿ ಶಾಂತಿ ನೆಲೆಸಲು ಯಶಸ್ವಿಯಾದರೆ ಆ ಸಂಖ್ಯೆ ಎಂಟಕ್ಕೆ ಏರಿಕೆಯಾಗುತ್ತದೆ’ ಎಂದು ಹೇಳಿದ್ದಾರೆ.
‘ನನಗೆ ನೊಬೆಲ್ ಪ್ರಶಸ್ತಿ ಸಿಗುತ್ತದೆಯೇ? ಖಂಡಿತ ಇಲ್ಲ. ಅದನ್ನು ಅವರು ಕೆಟ್ಟ ಕೆಲಸ ಮಾಡಿದ ವ್ಯಕ್ತಿಗೆ ನೀಡುತ್ತಾರೆ’ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
‘ನನಗೆ ನೊಬೆಲ್ ಪ್ರಶಸ್ತಿ ಕೊಡದಿದ್ದರೆ ಅದು ನಮ್ಮ ದೇಶಕ್ಕೆ ಮಾಡಿದ ದೊಡ್ಡ ಅವಮಾನವಾಗುತ್ತದೆ. ನನಗೆ ನೊಬೆಲ್ ಪ್ರಶಸ್ತಿ ಬೇಡ. ಆದರೆ ನಮ್ಮ ದೇಶಕ್ಕೆ ಅದು ಸಿಗಬೇಕೆಂದು ನಾನು ಬಯಸುತ್ತೇನೆ. ಯಾರೂ ಮಾಡದ ಕೆಲಸವನ್ನು ನಾನು ಮಾಡಿದ್ದೇನೆ’ ಎಂದು ಹೇಳಿದ್ದಾರೆ.
2009 ರಲ್ಲಿ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಯುದ್ಧಗಳನ್ನು ನಿಲ್ಲಿಸಿದ್ದಕ್ಕಾಗಿ ತಮಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು ಎಂದು ಟ್ರಂಪ್ ಹಲವು ಸಂದರ್ಭಗಳಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.