ಇಸ್ಲಾಮಾಬಾದ್: ಧರ್ಮನಿಂದನೆ ಆರೋಪದಿಂದ ಕ್ರೈಸ್ತ ಮಹಿಳೆ ಆಸಿಯಾ ಬೀಬಿ ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಪಾಕಿಸ್ತಾನ ಸುಪ್ರೀಂಕೋರ್ಟ್ ಮಂಗಳವಾರ ವಜಾ ಮಾಡಿದೆ.
ವಿಚಾರಣಾ ನ್ಯಾಯಾಲಯ 2010ರಲ್ಲಿ ಆಸಿಯಾ ಬೀಬಿ ದೋಷಿ ಎಂದು ತೀರ್ಪು ನೀಡಿತ್ತು. ಲಾಹೋರ್ ಹೈಕೋರ್ಟ್ ಸಹ ಆಸಿಯಾ ಬೀಬಿಗೆ ನೀಡಿದ್ದ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಕಳೆದ ವರ್ಷ ಸುಪ್ರೀಂಕೋರ್ಟ್ ಆಸಿಯಾ ಬೀಬಿಗೆ ನೀಡಿದ್ದ ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.