ADVERTISEMENT

ಜೈಶಂಕರ್‌ ಜೊತೆಗಿನ ಚರ್ಚೆ ಫಲಪ್ರದ: ಬ್ಲಿಂಕೆನ್‌

ಪಿಟಿಐ
Published 29 ಮೇ 2021, 8:50 IST
Last Updated 29 ಮೇ 2021, 8:50 IST
ಅಮೆರಿಕದ ವಾಷಿಂಗ್ಟನ್‌ನಲ್ಲಿ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರೊಂದಿಗೆ ಚರ್ಚೆ ನಡೆಸಿದ ಭಾರತದ ವಿದೇಶಾಂಗ ಸಚಿವ ಜೈಶಂಕರ್‌              –ಪಿಟಿಐ/ಎಪಿ ಚಿತ್ರ
ಅಮೆರಿಕದ ವಾಷಿಂಗ್ಟನ್‌ನಲ್ಲಿ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರೊಂದಿಗೆ ಚರ್ಚೆ ನಡೆಸಿದ ಭಾರತದ ವಿದೇಶಾಂಗ ಸಚಿವ ಜೈಶಂಕರ್‌              –ಪಿಟಿಐ/ಎಪಿ ಚಿತ್ರ   

ವಾಷಿಂಗ್ಟನ್‌: ‘ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೆ ಕೋವಿಡ್‌ ಪರಿಹಾರ, ಭಾರತ–ಚೀನಾ ಗಡಿ ಪರಿಸ್ಥಿತಿ ಸೇರಿದಂತೆ ಇತರೆ ವಿಷಯಗಳ ಕುರಿತಾಗಿ ಮಹತ್ವದ ಚರ್ಚೆ ನಡೆಸಲಾಯಿತು’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ತಿಳಿಸಿದರು.

ಅಮೆರಿಕದ ವಿದೇಶಾಂಗ ಇಲಾಖೆಯ ಕೇಂದ್ರ ಕಚೇರಿ ಫಾಗ್ಗಿ ಬಾಟಮ್‌ನಲ್ಲಿ ಜೈ ಶಂಕರ್‌ ಮತ್ತು ಬ್ಲಿಂಕೆನ್ ಸಭೆ ನಡೆಸಿದರು. ಈ ಬಳಿಕ ಟ್ವೀಟ್‌ ಮಾಡಿದ ಬ್ಲಿಂಕೆನ್, ‘ಪ್ರಾದೇಶಿಕ ಭದ್ರತೆ, ಅಮೆರಿಕದಿಂದ ಕೋವಿಡ್‌ ಪರಿಹಾರ ಪ್ರಯತ್ನಗಳು, ಭಾರತ–ಚೀನಾ ಗಡಿ ಪರಿಸ್ಥಿತಿ ಮತ್ತು ಅಫ್ಘಾನಿಸ್ತಾನಕ್ಕೆ ಸಹಕಾರ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಜೈಶಂಕರ್‌ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಷಯಗಳ ಬಗ್ಗೆ ಉಭಯ ರಾಷ್ಟ್ರಗಳು ಜಂಟಿಯಾಗಿ ಕೆಲಸ ಮಾಡಲಿವೆ’ ಎಂದು ಹೇಳಿದರು.

‘ದ್ವಿಪಕ್ಷೀಯ ಸಹಕಾರ ಮತ್ತು ಪ್ರಾದೇಶಿಕ, ಜಾಗತಿಕ ವಿಷಯಗಳ ಕುರಿತು ಬ್ಲಿಂಕೆನ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ನಾವು ಈ ವೇಳೆ ಇಂಡೋ–ಫೆಸಿಫಿಕ್, ಕ್ವಾಡ್‌, ಅಫ್ಘಾನಿಸ್ತಾನ, ಮ್ಯಾನ್ಮಾರ್‌, ಯುಎನ್‌ಎಸ್‌ಸಿ ಮತ್ತು ಇತರೆ ಅಂತರರಾಷ್ಟ್ರೀಯ ಸಂಸ್ಥೆಗಳ ಬಗ್ಗೆಯೂ ಮಾತುಕತೆ ನಡೆಸಲಾಯಿತು. ಲಸಿಕೆ ಪೂರೈಕೆ ಹೆಚ್ಚಿಸುವಲ್ಲಿ ಭಾರತ ಮತ್ತು ಅಮೆರಿಕದ ಸಹಭಾಗಿತ್ವದ ಕುರಿತಾಗಿಯೂ ಚರ್ಚೆ ನಡೆಸಲಾಯಿತು. ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಸಂಬಂಧವನ್ನು ಇನ್ನಷ್ಟು ಸದೃಢಗೊಳಿಸಿದೆ’ ಎಂದು ಜೈಶಂಕರ್ ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.