ವಾಷಿಂಗ್ಟನ್: ಲಂಡನ್‌ಗೆ ಹಾರುತ್ತಿದ್ದ ಏರ್‌ಇಂಡಿಯಾ ವಿಮಾನವು ಅಹಮದಾಬಾದ್‌ನಲ್ಲಿಯೇ ಪತನಗೊಂಡ ಬೆನ್ನಲ್ಲೇ, ‘ಏರ್ ಇಂಡಿಯಾ ಸಂಸ್ಥೆಗೆ ಅಗತ್ಯ ನೆರವು ನೀಡಲು ಸಿದ್ಧ’ ಎಂದು ಅಮೆರಿಕದ ವಿಮಾನ ತಯಾರಿಕಾ ಕಂಪನಿ ಬೋಯಿಂಗ್ ತಿಳಿಸಿದೆ.
‘ಬೋಯಿಂಗ್ 787–8 ಡ್ರೀಮ್‌ಲೈನರ್’ಗೆ ಸಂಬಂಧಿಸಿದಂತೆ, ನಾವು ಏರ್ ಇಂಡಿಯಾದ ಜೊತೆ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡಲು ಸಿದ್ಧರಿದ್ದೇವೆ. ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರು, ಸಿಬ್ಬಂದಿ ಕುಟುಂಬಸ್ಥರ ದುಃಖದಲ್ಲಿ ನಾವಿದ್ದೇವೆ’ ಎಂದು ತಿಳಿಸಿದೆ.
‘ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಸಂಸ್ಥೆ ಈ ಹಿಂದೆ ಹೇಳಿಕೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.