ADVERTISEMENT

ಗುಣಮುಖರಾದ ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸನ್‌ ಮರಳಿ ಕೆಲಸಕ್ಕೆ

ಏಜೆನ್ಸೀಸ್
Published 27 ಏಪ್ರಿಲ್ 2020, 3:33 IST
Last Updated 27 ಏಪ್ರಿಲ್ 2020, 3:33 IST
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್   

ಲಂಡನ್‌: ಕೊರೊನಾದಿಂದ ಗುಣಮುಖರಾದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸೋಮವಾರ ಕೆಲಸಕ್ಕೆಮರಳಲಿದ್ದಾರೆ. ಕೋವಿಡ್‌ ಬಿಕ್ಕಟ್ಟನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಭಾಯಿಸುವ ಒತ್ತಡ ಬ್ರಿಟನ್‌ ಸರ್ಕಾರದ ಮೇಲಿದೆ.

ಕೊರೊನಾದಿಂದಾಗಿ 813 ಮಂದಿ ಶನಿವಾರ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆಯು ಅಂಕಿ ಅಂಶ ಬಿಡುಗಡೆ ಮಾಡಿದ ನಂತರ ಪ್ರಧಾನಿ ಕೆಲಸಕ್ಕೆ ಮರಳುವ ಬಗ್ಗೆ ನಿರ್ಧರಿಸಿದ್ದಾರೆ. ಒಂದೇ ದಿನದಲ್ಲಿ ಸಾವಿನ ಸಂಖ್ಯೆ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಬೋರಿಸ್‌ ಅವರು ಕೊರೊನಾ ಸೋಂಕಿನಿಂದ ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದು, ನಂತರ ಸಹಜ ಸ್ಥಿತಿಗೆ ಬಂದಿದ್ದರು.ಈವರೆಗೆ 20.319 ಮಂದಿ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.