ಟಿಬೆಟ್ನಲ್ಲಿ ಹರಿಯುವ ಯಾರ್ಲಂಗ್ ಸಂಗ್ಪೊ ನದಿಯ ನೋಟ
ಬೀಜಿಂಗ್: ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲು ನಿರ್ಧರಿಸಿರುವ ಚೀನಾ, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.
ಟಿಬೆಟ್‌ನಲ್ಲಿ ಸ್ಥಳೀಯವಾಗಿ ಯಾರ್ಲಂಗ್ ಸಂಗ್ಪೊ ಎಂದು ಕರೆಯುವ ಬ್ರಹ್ಮಪುತ್ರ ನದಿಯ ಕೆಳಭಾಗದಲ್ಲಿ ಅಣೆಕಟ್ಟು ಕಟ್ಟುವ ಕೆಲಸವನ್ನು ಪ್ರಾರಂಭಿಸಲು ಚೀನಾ ಪ್ರಧಾನಿ ಲಿ ಕಿಯಾಂಗ್ ಸೂಚಿಸಿದ್ದಾರೆ. ವಿಶ್ವದಲ್ಲೇ ಅತಿ ದೊಡ್ಡ ಅಣೆಕಟ್ಟು ಇದಾಗಿದೆ.
ಈ ಯೋಜನೆಯಿಂದ ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ‘ಅಣೆಕಟ್ಟು ನದಿಯ ಮೇಲ್ಭಾಗದವರೆಗೆ ಬಂದರೂ ನದಿಯ ಮಟ್ಟದಿಂದ ಕೆಳಕ್ಕಿರುವ ಪ್ರದೇಶಗಳ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದ್ದಾರೆ.
ಆದರೂ, ಅಣೆಕಟ್ಟಿನ ನಿರ್ಮಾಣದಿಂದ ಪರಿಸರದ ಮೇಲಾಗುವ ಸಂಭಾವ್ಯ ಪರಿಣಾಮದ ಬಗ್ಗೆ ಭಾರತದಲ್ಲಿ ಹೆಚ್ಚಿನ ಕಳವಳಗಳು ವ್ಯಕ್ತವಾಗಿವೆ. ಅಲ್ಲದೆ ಅಣೆಕಟ್ಟು ನಿರ್ಮಾಣದ ಬಗ್ಗೆ ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.