ಜೈರ್ ಬೊಲ್ಸನಾರೊ
ಸಾವೊ ಪಾಲೊ(ಬ್ರೆಜಿಲ್): ಗಲಭೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೊಲ್ಸನಾರೊ ಅವರನ್ನು ಗೃಹಬಂಧನಕ್ಕೆ ಒಳಪಡಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿದೆ.
2022ರ ಅಕ್ಟೋಬರ್ 31ರಂದು ನಡೆದ ಚುನಾವಣೆಯಲ್ಲಿ ಬಲಪಂಥೀಯ ನಾಯಕ ಬೊಲ್ಸನಾರೊ, ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಎದುರು ಸೋತಿದ್ದರು. ಈ ಸೋಲನ್ನು ಒಪ್ಪಿಕೊಳ್ಳದ ಬೊಲ್ಸನಾರೊ ಬೆಂಬಲಿಗರು ರಾಷ್ಟ್ರಪತಿ ಭವನ, ಸುಪ್ರೀಂ ಕೋರ್ಟ್ ಮತ್ತು ಸಂಸತ್ ಮೇಲೆ ದಾಳಿ ನಡೆಸಿದ್ದರು.
‘ಚುನಾವಣೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವ ಮೂಲಕ ಬೊಲ್ಸನಾರೊ ನ್ಯಾಯಾಂಗದ ಆದೇಶವನ್ನು ಉಲ್ಲಂಘಿಸಿದ್ದಾರೆ’ ಎಂದು ನ್ಯಾಯಮೂರ್ತಿ ಅಲೆಕ್ಸಾಂಡ್ರೆ ಡಿ. ಮೊರೇಸ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಪ್ರಯಾಣಕ್ಕೆ ಅವಕಾಶವಿಲ್ಲದ ಕಾರಣ ಬೊಲ್ಸನಾರೊ ಅವರು ರಾಜಧಾನಿ ಬ್ರೆಸಿಲಿಯಾದಲ್ಲಿಯೇ ಗೃಹಬಂಧನದಲ್ಲಿ ಉಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ಬೊಲ್ಸನಾರೊ ವಿರುದ್ಧದ ತನಿಖೆಯನ್ನು ಕೈಬಿಡುವಂತೆ ಎಚ್ಚರಿಸಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, ಬ್ರೆಜಿಲ್ ಸರಕುಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.