ನರೇಂದ್ರ ಮೋದಿ
(ಪಿಟಿಐ ಚಿತ್ರ)
ರಿಯೊ ಡಿ ಜನೈರೊ: ಮುಂದಿನ ವರ್ಷ ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, 'ಮಾನವೀಯತೆಗೆ ಮೊದಲ ಆದತ್ಯೆ' ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ಹವಾಮಾನ ಬದಲಾವಣೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.
ಜಿ-20 ಅಧ್ಯಕ್ಷತೆಯ ಕಾರ್ಯಸೂಚಿಯಂತೆ ಬ್ರಿಕ್ಸ್ ಅಧ್ಯಕ್ಷತೆಯಲ್ಲೂ ಮಾನವೀಯತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
'ತಂತ್ರಜ್ಞಾನದ ವರ್ಗಾವಣೆ ಹಾಗೂ ಹಣಕಾಸಿನ ನೆರವು ಒದಗಿಸದಿದ್ದರೆ ಹವಾಮಾನ ಮಾತುಕತೆ ಸೀಮಿತವಾಗಿರಲಿದೆ. ಈ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಹೊಂದಿದ ದೇಶಗಳು ವಿಶೇಷ ಜವಾಬ್ದಾರಿಯನ್ನು ಹೊಂದಿವೆ' ಎಂದು ಅವರು ಉಲ್ಲೇಖಿಸಿದ್ದಾರೆ.
'ವಿವಿಧ ಸಮಸ್ಯೆಗಳಿಂದಾಗಿ ಆಹಾರ, ಇಂಧನ, ರಸಗೊಬ್ಬರ ಮತ್ತು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಎಲ್ಲ ದೇಶಗಳನ್ನು ನಾವು ಜೊತೆಗೆ ಕರೆದೊಯ್ಯಬೇಕು. ಭಾರತದ ಬ್ರಿಕ್ಸ್ ಅಧ್ಯಕ್ಷೆಯಲ್ಲಿ ಎಲ್ಲರೊಂದಿಗೆ ಸಹಕಾರ, ಸುಸ್ಥಿರತೆ ಹಾಗೂ ನಾವೀನ್ಯತೆಯತ್ತ ಗಮನ ಹರಿಸಲಾಗುವುದು' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.