ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ
– ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಅಮೆರಿಕ ವಿರೋಧಿ ನೀತಿಗಳೊಂದಿಗೆ ರಾಜಿ ಮಾಡಿಕೊಳ್ಳುವ ದೇಶಗಳಿಗೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
ಎರಡು ದಿನಗಳ ಬ್ರಿಕ್ಸ್ ಸಮಾವೇಶವು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಭಾನುವಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆ 'ಟ್ರುತ್'ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, 'ಬ್ರಿಕ್ಸ್‌ನ ಅಮೆರಿಕ ವಿರೋಧಿ ನೀತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ರಾಷ್ಟ್ರಗಳಿಗೆ ಹೆಚ್ಚುವರಿಯಾಗಿ ಶೇ 10ರಷ್ಟು ಸುಂಕ ವಿಧಿಸಲಾಗುವುದು' ಎಂದು ತಿಳಿಸಿದ್ದಾರೆ.
ಆದರೆ, ಬ್ರಿಕ್ಸ್ ಸಮಾವೇಶದಲ್ಲಿ ಮಾಡಿಕೊಂಡಿರುವ ಅಥವಾ ಮಾಡಿಕೊಳ್ಳಲಿರುವ ಅಮೆರಿಕ ವಿರೋಧಿ ನೀತಿಗಳು ಯಾವುವು ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ.
2009ರಲ್ಲಿ ರಚನೆಯಾದ ಬ್ರಿಕ್ಸ್‌ನ ಮೊದಲ ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ ಹಾಗೂ ಚೀನಾ ಪಾಲ್ಗೊಂಡಿದ್ದವು. ನಂತರ ದಕ್ಷಿಣ ಆಫ್ರಿಕಾ ಈ ಗುಂಪಿಗೆ ಸೇರಿತ್ತು. ಕಳೆದ ವರ್ಷ ಈಜಿಪ್ಟ್, ಇಥಿಯೋಪಿಯಾ, ಇರಾನ್ ಹಾಗೂ ಯುಎಇ ಬ್ರಿಕ್ಸ್ ಸದಸ್ಯತ್ವ ಪಡೆದಿದ್ದವು. ಈ ವರ್ಷ ಇಂಡೋನೇಷ್ಯಾ ಸೇರಿರುವುದರಿಂದ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಸಂಖ್ಯೆ 10ಕ್ಕೇರಿದೆ.
ಡೊನಾಲ್ಡ್ ಟ್ರಂಪ್ ಸಂದೇಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.