ಲಂಡನ್: ಕೋವಿಡ್–19 ಸಾಂಕ್ರಾಮಿಕ ರೋಗದ ಕಾರಣಕ್ಕಾಗಿ ಬ್ರಿಟನ್ನಲ್ಲಿ ವಿಧಿಸಲಾಗಿರುವ ಲಾಕ್ಡೌನ್ ನಿರ್ಬಂಧಗಳನ್ನು ನಾಲ್ಕು ವಾರಗಳ ತಡವಾಗಿ ಅಂದರೆ ಜುಲೈ 19ಕ್ಕೆ ತೆರವುಗೊಳಿಸಲಾಗುವುದು ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಪ್ರಕಟಿಸಿದ್ದಾರೆ.
ಈ ಹಿಂದೆ ಜೂನ್ 21ಕ್ಕೆ ಲಾಕ್ಡೌನ್ ನಿರ್ಬಂಧ ತೆರವುಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ರೂಪಾಂತರ ಕೊರೊನಾ ಸೋಂಕು ಮರುಕಳಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗಾಗಿ, ಜುಲೈ 19ರ ತನಕ ಲಾಕ್ಡೌನ್ ನಿರ್ಬಂಧ ಮುಂದುವರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.