ADVERTISEMENT

ನೈಋತ್ಯ ಚೀನಾದಲ್ಲಿ ಬಸ್ ಅಪಘಾತ: 27 ಮಂದಿ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2022, 6:56 IST
Last Updated 18 ಸೆಪ್ಟೆಂಬರ್ 2022, 6:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್: ನೈರುತ್ಯ ಚೀನಾದ ಪರ್ವತ ಪ್ರದೇಶವಾದ ಗೈಝೌ ಪ್ರಾಂತ್ಯದ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 27 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗೈಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್‌ನ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದೆ.

ಬಸ್‌ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.