ADVERTISEMENT

ದಕ್ಷಿಣ ಆಫ್ರಿಕಾ; ಸೇತುವೆಯಿಂದ ಉರುಳಿದ ಬಸ್‌: ಈಸ್ಟರ್‌ಗೆ ಹೊರಟಿದ್ದ 45 ಜನ ಸಾವು

ಏಜೆನ್ಸೀಸ್
Published 29 ಮಾರ್ಚ್ 2024, 9:26 IST
Last Updated 29 ಮಾರ್ಚ್ 2024, 9:26 IST
<div class="paragraphs"><p>ಸೇತುವೆಯಿಂದ ಉರುಳಿದ ಬಸ್‌</p></div>

ಸೇತುವೆಯಿಂದ ಉರುಳಿದ ಬಸ್‌

   

ರಾಯಿಟರ್ಸ್‌ ಚಿತ್ರ

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಈಸ್ಟರ್‌ ಹಬ್ಬಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಮಮಟ್ಲಕಾ ಸೇತುವೆ ಮೇಲಿಂದ ಉರುಳಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 45 ಪ್ರಯಾಣಿಕರು ಮೃತಪಟ್ಟಿದ್ದಾರೆ.

ADVERTISEMENT

ಘಟನೆಯಲ್ಲಿ 8 ವರ್ಷದ ಬಾಲಕನೊಬ್ಬ ಅದೃಷ್ಟವಶಾತ್‌ ಬದುಕುಳಿದಿದ್ದಾನೆ. ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಿಂಪೊಪೊ ಉತ್ತರ ಪ್ರಾಂತ್ಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಮಟ್ಲಕಾ ಸೇತುವೆಯಿಂದ ಬಸ್‌ 164 ಅಡಿ ಆಳಕ್ಕೆ ಬಿದ್ದ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಸ್ಸು ವೇಗವಾಗಿ ಚಲಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯ ಮೂಲಕ ಗೊತ್ತಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಬಸ್‌ನಲ್ಲಿದ್ದವರು ನೆರೆಯ ದೇಶವಾದ ಬೋಟ್ಸ್‌ವಾನಾದಿಂದ ಈಸ್ಟರ್ ತೀರ್ಥಯಾತ್ರೆಗಾಗಿ ಮೋರಿಯಾ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.