ಪಾಕಿಸ್ತಾನ: ಬಸ್ಸು ಮತ್ತು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 30 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಇಲ್ಲಿನ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದೆ.
ರೈಲು ಬರುತ್ತಿರುವುದನ್ನು ಗಮನಿಸದ ಚಾಲಕ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ರೈಲು ಅಧಿಕಾರಿಗಳು, ಪೊಲೀಸರು ಆಗಮಿಸಿದ್ದು ತನಿಖೆ ಮುಂದುವರಿದಿದೆ ಎಂದು ಎಎನ್ಐ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.