ADVERTISEMENT

ಕ್ಯಾಲಿಫೋರ್ನಿಯಾ: ಗುಂಡಿನ ದಾಳಿಯಲ್ಲಿ ನಾಲ್ವರು ಸಾವು

ಏಜೆನ್ಸೀಸ್
Published 1 ಏಪ್ರಿಲ್ 2021, 6:05 IST
Last Updated 1 ಏಪ್ರಿಲ್ 2021, 6:05 IST
ದಕ್ಷಿಣ ಕ್ಯಾಲಿಫೋರ್ನಿಯಾದ ಆರೆಂಜ್‌ನಲ್ಲಿ ಗುಂಡಿನ ದಾಳಿ ನಡೆದ ಕಚೇರಿ ಕಟ್ಟಡಕ್ಕೆ ಆಗಮಿಸಿದ ಪೊಲೀಸ್ ಪಡೆ                                          –ರಾಯಿಟರ್ಸ್‌ ಚಿತ್ರ
ದಕ್ಷಿಣ ಕ್ಯಾಲಿಫೋರ್ನಿಯಾದ ಆರೆಂಜ್‌ನಲ್ಲಿ ಗುಂಡಿನ ದಾಳಿ ನಡೆದ ಕಚೇರಿ ಕಟ್ಟಡಕ್ಕೆ ಆಗಮಿಸಿದ ಪೊಲೀಸ್ ಪಡೆ                                          –ರಾಯಿಟರ್ಸ್‌ ಚಿತ್ರ   

ಆರೆಂಜ್ (ಕ್ಯಾಲಿಫೋರ್ನಿಯಾ): ದಕ್ಷಿಣ ಕ್ಯಾಲಿಫೋರ್ನಿಯಾದ ಕಚೇರಿ ಕಟ್ಟಡವೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಇದರಲ್ಲಿ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಆರೆಂಜ್‌ನ ಎರಡು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.

‘ಪೊಲೀಸ್ ಮತ್ತು ಶಂಕಿತ ವ್ಯಕ್ತಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಶಂಕಿತನಿಗೆ ಗುಂಡು ತಗುಲಿದೆ. ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು’ ಎಂದು ಪೊಲೀಸ್‌ ಅಧಿಕಾರಿ ಲೆಫ್ಟಿನೆಂಟ್‌ ಜೆನಿಫರ್‌ ಅಮಾತ್‌ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.