ADVERTISEMENT

ಕೋವಿಡ್‌ ಲಸಿಕೆಗಳಿಂದ ಸಾಮುದಾಯಿಕ ರೋಗ ನಿರೋಧಕ ಶಕ್ತಿ: ತಜ್ಞರ ಅನುಮಾನ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 15:10 IST
Last Updated 18 ನವೆಂಬರ್ 2020, 15:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಂಡನ್‌: ಮೊದಲು ಬಿಡುಗಡೆಯಾಗುವ ಕೋವಿಡ್‌-19 ಲಸಿಕೆಗಳು ಸಾಮುದಾಯಿಕ ರೋಗ ನಿರೋಧಕ ಶಕ್ತಿಯನ್ನು (ಹರ್ಡ್‌ ಇಮ್ಯೂನಿಟಿ) ತರಬಹುದು ಎಂಬ ಅಭಿಪ್ರಾಯದ ಬಗ್ಗೆ ಕೆಲ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ ಮೂರನೇ ಎರಡರಷ್ಟು ಜನಸಂಖ್ಯೆಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಸಾಂಕ್ರಾಮಿಕ ರೋಗವನ್ನು ತಡೆಯಬಹುದು. ಸಮುದಾಯಗಳು ಅಥವಾ ರಾಷ್ಟ್ರಗಳನ್ನು ರಕ್ಷಿಸಲು ಇದು ಸಹಾಯ ಮಾಡುತ್ತದೆ ಎಂದು ಕೆಲ ಸರ್ಕಾರಗಳು ಮತ್ತು ಸರ್ಕಾರಿ ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದರು.

ಇಂತಹ ಅಭಿಪ್ರಾಯಗಳು ಕೋವಿಡ್‌ ಲಸಿಕೆಗಳ ಬೇಡಿಕೆಗಳನ್ನು ಹೆಚ್ಚಿಸಬಹುದು ಮತ್ತು ಜನರ ನಿರೀಕ್ಷೆಗಳನ್ನು ಹುಸಿಗೊಳಿಸಬಹುದು ಎಂದು ಕೆಲ ತಜ್ಞರು ಹೇಳಿದ್ದಾರೆ.

ADVERTISEMENT

'ಹರ್ಡ್ ಇಮ್ಯೂನಿಟಿ ವೃದ್ಧಿಯಾಗುವುದರಿಂದ'ನನ್ನ ಮೇಲೆ ಪರಿಣಾಮ ಬೀರುವುದಿಲ್ಲ' ಎಂದು ಯೋಚಿಸುವುದು ಸೂಕ್ತವಲ್ಲ. ಹರ್ಡ್‌ ಇಮ್ಯೂನಿಟಿಯ ಮೂಲಕ ಸಮುದಾಯವನ್ನು ರಕ್ಷಿಸಬೇಕಿದೆ. ಅದು ಕೇವಲ ಒಬ್ಬ ವ್ಯಕ್ತಿಯನ್ನು ರಕ್ಷಿಸಲಿದೆ ಎಂಬ ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ' ಎಂದು ಯುರೋಪಿಯನ್ ಸೆಂಟರ್ ಫಾರ್ ಡಿಸೀಸ್ ಪ್ರಿವೆನ್ಷನ್ ಅಂಡ್ ಕಂಟ್ರೋಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.