ADVERTISEMENT

ಕೆನಡಾದಲ್ಲಿ 15 ಓಮೈಕ್ರಾನ್‌ ಪ್ರಕರಣ ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2021, 3:00 IST
Last Updated 4 ಡಿಸೆಂಬರ್ 2021, 3:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಟೊರೊಂಟೊ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ 15 ಪ್ರಕರಣಗಳು ಕೆನಡಾದಲ್ಲಿ ಪತ್ತೆಯಾಗಿವೆ.

ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ADVERTISEMENT

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್‌ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.