ADVERTISEMENT

ಕೆನಡಾದಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ 10 ಮಂದಿ ಸಾವು

ಏಜೆನ್ಸೀಸ್
Published 11 ಫೆಬ್ರುವರಿ 2026, 3:17 IST
Last Updated 11 ಫೆಬ್ರುವರಿ 2026, 3:17 IST
   

ಒಟ್ಟಾವ: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಬಂದೂಕುಧಾರಿ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ.

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದ ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಒಬ್ಬ ಶಂಕಿತ ಮೃತಪಟ್ಟಿದ್ದರೂ, ಕೃತ್ಯದಲ್ಲಿ ಮತ್ತೊಬ್ಬ ಬಂದೂಕುಧಾರಿ ಭಾಗಿಯಾಗಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಟಂಬ್ಲರ್ ರಿಡ್ಜ್ ಶಾಲೆಯಲ್ಲಿ 7ರಿಂದ 12ನೇ ತರಗತಿಯವರೆಗೆ ಸುಮಾರು 175 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಸ್ಥಳೀಯ ಸರ್ಕಾರಿ ವೆಬ್‌ಸೈಟ್‌ವೊಂದು ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.