ಟೊರೊಂಟೊ: ‘ಪಂಜಾಬ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿಯಾ ಜೋಲಿ ತಿಳಿಸಿದ್ದಾರೆ.
ಕೆನಡಾ ಸಂಸದ, ಭಾರತೀಯ ಮೂಲದ ಇಕ್ವಿಂದರ್ ಎಸ್.ಗಹೀರ್ ಎಂಬುವರು ಗುರುವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ಕೇಳಿದ ಪ್ರಶ್ನೆಗೆ, ‘ನಮಗೆ ಪಂಜಾಬ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಅರಿವಿದೆ. ಅಲ್ಲಿ ಮೊದಲಿದ್ದ ಪರಿಸ್ಥಿತಿಯೇ ಮರಳಲಿ ಎಂದು ನಾವು ಬಯಸುತ್ತೇವೆ. ಆ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇವೆ’ ಎಂದು ಮೆಲಾನಿಯಾ ಉತ್ತರಿಸಿದ್ದಾರೆ.
ಪಂಜಾಬ್‌ನಲ್ಲಿ ಇಂಟರ್‌ನೆಟ್ ಸೇವೆಯ ಮೇಲೆ ನಿರ್ಬಂಧ ವಿಧಿಸಿರುವುದಾಗಿ ತಿಳಿದುಬಂದಿದೆ. ಭಾರತದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಸದನಕ್ಕೆ ಮಾಹಿತಿ ಒದಗಿಸಿ ಎಂದು ಗಹೀರ್ ಅವರು ಮೆಲಾನಿಯಾಗೆ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.