ADVERTISEMENT

ಪಂಜಾಬ್‌ ಪ್ರಾಂತ್ಯದಲ್ಲಿ ಎಲ್ಲಾ ಚೀನಿಯರಿಗೂ ಭದ್ರತೆ ನೀಡಲು ಸಾಧ್ಯವಿಲ್ಲ: ಪಾಕ್

ಪಿಟಿಐ
Published 3 ಫೆಬ್ರುವರಿ 2023, 16:13 IST
Last Updated 3 ಫೆಬ್ರುವರಿ 2023, 16:13 IST

ಲಾಹೋರ್‌: ಪಂಜಾಬ್‌ ಪ್ರಾಂತ್ಯದಲ್ಲಿ ನೆಲೆಸಿರುವ ಚೀನಾದ ಎಲ್ಲಾ ಪ್ರಜೆಗಳಿಗೆ ಭದ್ರತೆ ನೀಡಲು ಸಾಧ್ಯವಿಲ್ಲ. ಪ್ರಾಂತ್ಯದಲ್ಲಿ ನೆಲೆಸಿರುವವರು ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಚೀನಿಯರು ಖಾಸಗಿ ಭದ್ರತಾ ಕಂಪನಿಗಳಿಂದ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದು ಉತ್ತಮ ಎಂದು ಗೃಹ ಇಲಾಖೆ ನಿರ್ದೇಶನ ನೀಡಿದೆ.

ಪೆಶಾವರದ ಮಸೀದಿಯಲ್ಲಿ ನಡೆದ ಭೀಕರ ಆತ್ಮಾಹುತಿ ದಾಳಿಯ ಬಳಿಕ ಈ ಸೂಚನೆ ನೀಡಿದೆ.

ಆದರೆ ಚೀನಾ– ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಮತ್ತು ಪ್ರಾಂತ್ಯದಲ್ಲಿ ಇತರ ಸರ್ಕಾರಿ ಸಂಬಂಧಿತ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ನಿರಂತರವಾಗಿ ಭದ್ರತೆ ಒದಗಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.