ಟರ್ಕಿಯ ಎಸಿಟಿ ವಿಮಾನಸಂಸ್ಥೆಯ ಬೋಯಿಂಗ್ 747 ಸರಕು ಸಾಗಣೆ ವಿಮಾನ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದಿರುವುದು
ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನಲ್ಲಿ ಸರಕು ಸಾಗಣೆ ವಿಮಾನವೊಂದು ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಟರ್ಕಿಯ ಎಸಿಟಿ ವಿಮಾನಸಂಸ್ಥೆಯ ಬೋಯಿಂಗ್ 747 ವಿಮಾನ ದುಬೈನಿಂದ ಹಾಂಗ್‌ಕಾಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿ ಪ್ರಕಾರ ವಿಮಾನವು ಭದ್ರತಾ ಸಿಬ್ಬಂದಿ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಸಮುದ್ರಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.