ಜಮ್ಮು:ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ಜಿಲ್ಲೆಯಲ್ಲಿ ಗಡಿ ನಿಯಂತ್ರಣಾ ರೇಖೆಯ (ಎಲ್‌ಒಸಿ) ಬಳಿ ಇರುವ ಸೇನಾ ನೆಲೆಗಳ ಮೇಲೆ ಸೋಮವಾರ ಶೆಲ್ ದಾಳಿ ನಡೆಸಿದೆ.
ಪೂಂಚ್‌ನ ಬಾಲಾಕೋಟ್ ವಲಯ ಹಾಗೂ ಶಹಾಪುರ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಎಲ್‌ಒಸಿಯ ಬಳಿ ಸೇನಾ ನೆಲೆಗಳ ಮೇಲೆ ಗುಂಡು ಹಾಗೂ ಶೆಲ್ ದಾಳಿಯನ್ನು ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರತಿಯಾಗಿ ಭಾರತೀಯ ಸೇನೆಯೂ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.