ADVERTISEMENT

ಕ್ಯಾಲಿಫೋರ್ನಿಯಾದಲ್ಲಿ ಲಾಕ್‌ಡೌನ್‌ ಮುಂದುವರಿಸುವ ಸಾಧ್ಯತೆ

ಮನೆಯಿಂದ ಹೊರಬರದಂತೆ ಆದೇಶ ಹೊರಡಿಸುವ ಸಾಧ್ಯತೆ

ಏಜೆನ್ಸೀಸ್
Published 28 ಡಿಸೆಂಬರ್ 2020, 8:22 IST
Last Updated 28 ಡಿಸೆಂಬರ್ 2020, 8:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಾಸ್‌ ಏಂಜಲೀಸ್‌: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕೇಂದ್ರ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಲಾಕ್‌ಡೌನ್‌ ಮುಂದುವರಿಸುವ ಸಾಧ್ಯತೆ ಇದೆ.

ಕೋವಿಡ್‌ ರೋಗಿಗಳಿಗೆ ಆಸ್ಪತ್ರೆಗಳ ತುರ್ತು ನಿಗಾ ಘಟಕಗಳಲ್ಲಿ ಹಾಸಿಗೆಗಳ ಕೊರತೆಯಾಗುತ್ತಿದೆ. ಹೀಗಾಗಿ, ಜನರು ಮನೆಯಿಂದ ಹೊರಬರದಂತೆ ಸರ್ಕಾರವು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಕ್ಯಾಲಿಫೋರ್ನಿಯಾದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹೊಸ ವರ್ಷಾಚರಣೆ ಬಳಿಕ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕ್ಯಾಲಿಫೋರ್ನಿಯಾದಲ್ಲಿ ಕ್ರಿಸ್‌ಮಸ್‌ ಸಂದರ್ಭದಲ್ಲಿ ಕೊರೊನಾ ‍ಪ್ರಕರಣಗಳ ಸಂಖ್ಯೆ 20 ಲಕ್ಷ ದಾಟಿತ್ತು.

ADVERTISEMENT

ಸ್ಯಾನ್ ಜೊವಾಕ್ವಿನ್ ವ್ಯಾಲಿ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಮನೆಯಲ್ಲೇ ಉಳಿಯುವಂತೆ ಹೊರಡಿಸಲಾಗಿದ್ದ ಆದೇಶವು ಸೋಮವಾರ ಕೊನೆಗೊಳ್ಳಲಿದೆ. ಹಾಗಾಗಿ ಲಾಕ್‌ಡೌನ್‌ ಆದೇಶವನ್ನು ಮುಂದುವರಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.