ಬೀಜಿಂಗ್: ಬ್ರೆಝಿಲ್‌ನಲ್ಲಿ ಈ ವಾರ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ದೇಶದ ಅಧ್ಯಕ್ಷ ಷಿ ಜಿನ್‌ಪಿಂಗ್ ಗೈರಾಗಲಿದ್ದಾರೆ ಎಂದು ಚೀನಾ ಹೇಳಿದ್ದು, ಬದಲಾಗಿ ಪ್ರಧಾನಿ ಲಿ ಕ್ವಿಯಾಂಗ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ. ಅಧಿಕಾರ ಸ್ವೀಕರಿಸಿದ 12 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಷಿ ಜಿನ್‌ಪಿಂಗ್ ಅವರು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ದೇಶಗಳ ಈ ಸಭೆಯನ್ನು ತಪ್ಪಿಸಿಕೊಳ್ಳಲಿದ್ದಾರೆ.
ಬ್ರಿಝಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಲಿ ಕ್ವಿಯಾಂಗ್ ಭಾಗವಹಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಮಾಧ್ಯಮಗೋಷ್ಠಿಯಲ್ಲಿ ಇಲ್ಲಿ ಹೇಳಿದರು. ಆದಾಗ್ಯೂ, ತನ್ನ 12 ವರ್ಷಗಳ ಅಧಿಕಾರಾವಧಿಯಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಎಂದಿಗೂ ತಪ್ಪಿಸದ ಕ್ಸಿ ಅವರು ಕಾರ್ಯಕ್ರಮವನ್ನು ಏಕೆ ತಪ್ಪಿಸಿಕೊಂಳ್ಳುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ವರ್ಷ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ ಮತ್ತು ಕ್ಸಿ ಇಬ್ಬರೂ ಅಲ್ಲಿ ಭೇಟಿಯಾಗಿದ್ದರು. ಇದು ಪೂರ್ವ ಲಡಾಖ್‌ನಲ್ಲಿನ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡ ದ್ವಿಪಕ್ಷೀಯ ಸಂಬಂಧಗಳ ಮೇಲಿನ ನಾಲ್ಕು ವರ್ಷಗಳ ಬಿಕ್ಕಟ್ಟನ್ನು ಮುರಿಯಿತು.
ಈ ಭೇಟಿಯ ನಂತರ, ಉಭಯ ದೇಶಗಳ ವಿವಿಧ ದ್ವಿಪಕ್ಷೀಯ ಸಂವಾದ ಕಾರ್ಯವಿಧಾನಗಳನ್ನು ಪುನರುಜ್ಜೀವನಗೊಳಿಸಲು ಒಪ್ಪಿಕೊಳ್ಳಲಾಗಿತ್ತು. ಜೊತೆಗೆ ದ್ವಿಪಕ್ಷೀಯ ಸಂಬಂಧಗಳನ್ನು ಸಹಜ ಸ್ಥಿತಿಗೆ ತರುವ ಗುರಿಯನ್ನು ಹೊಂದಿರುವ ಉಭಯ ದೇಶ, ಕಳೆದ ಕೆಲವು ತಿಂಗಳುಗಳಲ್ಲಿ ಸರಣಿ ಸಭೆಗಳನ್ನು ನಡೆಸಿತ್ತು.
ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾಗಳನ್ನು ಒಳಗೊಂಡಿರುವ ಬ್ರಿಕ್ಸ್ ಅನ್ನು ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುಎಇ ಎಂಬ ಐದು ಹೆಚ್ಚುವರಿ ಸದಸ್ಯ ದೇಶಗಳೊಂದಿಗೆ ವಿಸ್ತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.