ADVERTISEMENT

ಚೀನಾದಲ್ಲಿ 5.6 ತೀವ್ರತೆಯ ಭೂಕಂಪ: 11 ಜನರಿಗೆ ಗಾಯ

ಪಿಟಿಐ
Published 27 ಸೆಪ್ಟೆಂಬರ್ 2025, 13:52 IST
Last Updated 27 ಸೆಪ್ಟೆಂಬರ್ 2025, 13:52 IST
   

ಬೀಜಿಂಗ್‌: ಚೀನಾದ ಗನ್ಸು ಪ್ರಾಂತ್ಯದಲ್ಲಿ ಶನಿವಾರ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, 11 ಜನರಿಗೆ ಗಾಯಗಳಾಗಿವೆ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ. ಭೂಕಂಪನದಿಂದ 17 ಮನೆಗಳು ಸಂಪೂರ್ಣ ನಾಶಗೊಂಡಿದ್ದು, 3,500ಕ್ಕೂ ಹೆಚ್ಚು ವಸತಿಗಳಿಗೆ ಭಾಗಶಃ ಹಾನಿಯಾಗಿದೆ. ತೀವ್ರ ಹಾನಿಗೊಳಗಾದ ಸ್ಥಳಗಳಿಂದ 7,800 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಸಿಸಿಟಿವಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT