ವಾಷಿಂಗ್ಟನ್: ಇಂಡೊ–ಪೆಸಿಫಿಕ್ ವಲಯದಲ್ಲಿ ಚೀನಾ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಹೆಚ್ಚು ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ ಎಂದು ಅಮೆರಿಕದ ರಕ್ಷಣಾ ಉಪ ಕಾರ್ಯದರ್ಶಿ ಡಾ. ಕ್ಯಾಥ್ಲೀನ್ ಹಿಕ್ಸ್ ಹೇಳಿದ್ದಾರೆ.
ನ್ಯಾಷನಲ್ ವಾರ್ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇಂಡೊ – ಫೆಸಿಫಿಕ್ ವಲಯದಲ್ಲಿ ಚೀನಾ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಮೂಲಕ ಬೆದರಿಕೆವೊಡ್ಡುತ್ತಿದೆ’ ಎಂದು ಹೇಳಿದರು.
‘ಭಾರತದೊಂದಿಗೆ ವಾಸ್ತವ ಗಡಿ ನಿಯಂತ್ರಣ ರೇಖೆ ಬಳಿ ಸಂಘರ್ಷ ಏರ್ಪಟ್ಟಿತ್ತು. ಭಾರತದ ಸೇನೆಯೊಂದಿಗೆ ನಡೆದ ಘರ್ಷಣೆಯಲ್ಲಿ ಹಲವು ಯೋಧರು ಮೃತಪಟ್ಟರು. ಈ ರೀತಿ ತನ್ನ ನೆರೆ ರಾಷ್ಟ್ರಗಳೊಂದಿಗೆ ಮಾತ್ರವಲ್ಲ, ಆಸ್ಟ್ರೇಲಿಯಾ, ಜಪಾನ್, ವಿಯೆಟ್ನಾಂ ಹಾಗೂ ಫಿಲಿಪ್ಪೀನ್ಸ್ನೊಂದಿಗೂ ಚೀನಾ ಕಳೆದ ವರ್ಷ ಸಂಘರ್ಷ ನಡೆಸಿತ್ತು’ ಎಂದು ಹಿಕ್ಸ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.