ಬೀಜಿಂಗ್: ಇಲ್ಲಿನ ಹೈನನ್ ರೆಸಾರ್ಟ್‌ನಲ್ಲಿ ಚೀನಾ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವರ ಮಟ್ಟದ ಎರಡು ದಿನಗಳ ಎರಡನೇ ವಾರ್ಷಿಕ ಸಭೆಗುರುವಾರ ಆರಂಭವಾಗಿದೆ.
ದ್ವಿಪಕ್ಷೀಯ ಸಂಬಂಧ ಸುಧಾರಣೆ ಹಾಗೂ ಮಹಾತ್ವಾಕಾಂಕ್ಷೆಯ ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆಯ ಎರಡನೇ ಹಂತದ ಬೆಳವಣಿಗೆ ಚರ್ಚೆಯ ವಿಷಯವಾಗಿವೆ.
ಸಭೆಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.