ADVERTISEMENT

ಚೀನಾ: ಅಗ್ನಿ ದುರಂತದಲ್ಲಿ 38 ಸಾವು

ಪಿಟಿಐ
Published 22 ನವೆಂಬರ್ 2022, 11:31 IST
Last Updated 22 ನವೆಂಬರ್ 2022, 11:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್‌: ಚೀನಾದ ಹನನ್‌ ಪ್ರಾಂತ್ಯದಅನ್ಯಾಂಗ್‌ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ ಸೋಮವಾರ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಸುಮಾರು 38 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುಮಾರು 4 ಗಂಟೆ ಸಮಯ ತಗುಲಿತು. ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ 38 ಜನರು ಮೃತಪಟ್ಟರು, ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಕ್ಕಾಗಿ 63 ವಾಹನಗಳನ್ನು ಮತ್ತು 240 ಸಿಬ್ಬಂದಿಯನ್ನು ದುರಂತ ನಡೆದ ಸ್ಥಳಕ್ಕೆ ಕಳುಹಿಸಲಾಗಿತ್ತು. ಅಲ್ಲದೆ ಚೀನಾ ತುರ್ತು ಪರಿಸ್ಥಿತಿ ನಿರ್ವಹಣಾ ಸಚಿವಾಲಯವು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಿತ್ತು ಎಂದು ಅಲ್ಲಿಯ ಪತ್ರಿಕೆ ವರದಿ ಮಾಡಿದೆ.

ಘಟನೆ ಕುರಿತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ತಕ್ಷಣಕ್ಕೆ ಗೊತ್ತಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.