ಹಾಂಗ್‌ಕಾಂಗ್ : ಚೀನಾದಲ್ಲಿ ಕೋವಿಡ್‌ನಿಂದ ಇಬ್ಬರು ಸಾವಿಗೀಡಾಗಿರುವ ಪ್ರಕರಣಭಾನುವಾರ ವರದಿಯಾಗಿದೆ.
ಚೀನಾದಲ್ಲಿ ಹೇರಲಾಗಿರುವ ಕೋವಿಡ್ ನಿರ್ಬಂಧಗಳ ವಿರುದ್ಧ ಅಲ್ಲಿನ ಸಾರ್ವಜನಿಕರ ಹತಾಶೆ ಹೆಚ್ಚುತ್ತಿರುವುದರಿಂದಾಗಿ ಕೆಲವು ನಗರಗಳು ಎಚ್ಚರಿಕೆಯಿಂದ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲು ಚಿಂತಿಸುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.
ಶಾನ್‌ದಾಂಗ್ ಹಾಗೂ ಸಿಚುವಾನ್ ಪ್ರಾಂತ್ಯದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಅಲ್ಲಿನ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.ಮೃತರು ಕೋವಿಡ್ ಲಸಿಕೆಯನ್ನು ಪೂರ್ಣವಾಗಿ ಪಡೆದುಕೊಂಡಿದ್ದರೇ, ಇಲ್ಲವೇ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.