ADVERTISEMENT

ಚೀನಾದಲ್ಲಿ ಎಂಬಿಬಿಎಸ್‌: 45 ಕಾಲೇಜುಗಳಲ್ಲಿ ಮಾತ್ರ ವಿದೇಶಿಯರಿಗೆ ಅವಕಾಶ

ಪಿಟಿಐ
Published 8 ಅಕ್ಟೋಬರ್ 2019, 18:11 IST
Last Updated 8 ಅಕ್ಟೋಬರ್ 2019, 18:11 IST

ಬೀಜಿಂಗ್‌: ದೇಶದ ನಲವತ್ತೈದು ವೈದ್ಯಕೀಯ ಕಾಲೇಜುಗಳಲ್ಲಿ ಮಾತ್ರ ವಿದೇಶಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ನಲ್ಲಿ ಅಧ್ಯಯನ ಮಾಡುವುದಕ್ಕೆ ಅವಕಾಶ ನೀಡಲು ಚೀನಾ ಸರ್ಕಾರ ತೀರ್ಮಾನಿಸಿದೆ.

ಚೀನಾದಲ್ಲಿ 200ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿದ್ದು, ಪ್ರಸ್ತುತ 23 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಇಲ್ಲಿ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 21 ಸಾವಿರ ಮಂದಿ ಎಂಬಿಬಿಎಸ್‌ಗೆ ಸೇರಿದ್ದಾರೆ.ಪಾಕಿಸ್ತಾನದ 28 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 5 ಲಕ್ಷ ವಿದೇಶಿ ವಿದ್ಯಾರ್ಥಿಗಳು ಚೀನಾದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾರೆ.

‘45 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಇರದ ವಿಶ್ವವಿದ್ಯಾನಿಲಯಗಳು ವಿದೇಶಿ ವಿದ್ಯಾರ್ಥಿಗಳಿಗೆ ಚೀನಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ನೀಡಬಹುದು ಎಂದು ಶಿಕ್ಷಣ ಇಲಾಖೆ ಅಧಿಸೂಚನೆಯಲ್ಲಿ ಹೊರಡಿಸಿದೆ’ ಎಂದು ಭಾರತದ ರಾಯಭಾರ ಕಚೇರಿ ತಿಳಿಸಿದೆ.

ADVERTISEMENT

ಅಮೆರಿಕ, ಬ್ರಿಟನ್‌, ಆಸ್ಟ್ರೇಲಿಯಾದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಹೋಲಿಸಿದರೆ ಚೀನಾದಲ್ಲಿ ಕೈಗೆಟಕುವ ದರದಲ್ಲಿ ಪದವಿ ಗಳಿಸಬಹುದು. ಈ ಕಾರಣಕ್ಕೆ ಭಾರತ ಸೇರಿದಂತೆ ಏಷ್ಯಾದ ಇತರ ದೇಶಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚೀನಾದ ಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುತ್ತಾರೆ.

ಚೀನಾದ ವಿಶ್ವವಿದ್ಯಾಲಯಗಳು ವಿದೇಶಿ ವಿದ್ಯಾರ್ಥಿಗಳನ್ನು, ಅದರಲ್ಲೂ ಭಾರತೀಯರನ್ನು ಸೇರಿಸಿಕೊಳ್ಳಲು ಉತ್ಸುಕವಾಗಿವೆ. ಆದರೆ, ಇಂಗ್ಲಿಷ್‌ನಲ್ಲಿ ಬೋಧಿಸುವ ಉತ್ತಮ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳುವುದು ಹರಸಾಹಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.