ಬೀಜಿಂಗ್: ‘ಭಾರತ– ಚೀನಾ ನಡುವಿನ ಗಡಿ ವಿವಾದವು ಇನ್ನೂ ಸಂಕೀರ್ಣ ಸ್ಥಿತಿಯಲ್ಲಿದ್ದು, ಅದು ಬಗೆಹರಿಯಲು ಸಮಯ ಬೇಕಿದೆ. ಆದರೆ, ಗಡಿ ಪ್ರದೇಶಗಳ ಕ್ಷೇತ್ರ ಪುನರ್ವಿಂಗಡಣೆ ಕುರಿತು ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ’ ಎಂದು ಚೀನಾದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ನಡೆದಿದ್ದ ಶಾಂಘೈ ಸಮ್ಮೇಳನದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾ ರಕ್ಷಣಾ ಸಚಿವ ಡಾಂಗ್ ಜನ್ ಭಾಗಿಯಾಗಿದ್ದರು. ಈ ವೇಳೆ ಭಾರತ–ಚೀನಾ ನಡುವಿನ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಪ್ರಸ್ತಾಪವೂ ಬಂದಿತ್ತು.
ಈ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಚೀನಾದ ವಿದೇಶಾಂಗ ವಕ್ತಾರೆ ಮಾವೋ ನಿಂಗ್ ಮಾಹಿತಿ ನೀಡಿದ್ದು, ‘ಉಭಯ ರಾಷ್ಟ್ರಗಳ ನಡುವಿನ ಗಡಿ ವಿವಾದಗಳನ್ನು ಬಗೆಹರಿಸಿಕೊಳ್ಳಲು ಎರಡೂ ರಾಷ್ಟ್ರಗಳೂ ತಮ್ಮದೇ ಆದ ರಾಜತಾಂತ್ರಿಕ ಹಾಗೂ ಮಿಲಿಟರಿ ಕಾರ್ಯವಿಧಾನಗಳನ್ನು ಹೊಂದಿವೆ. ಅದರಂತೆಯೇ ಅವು ಬಗೆಹರಿಯಬೇಕಿದೆ. ಆದರೆ, ಗಡಿ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸಲು ಮತ್ತು ಸಹಕಾರ ವೃದ್ಧಿಸುವ ನಿಟ್ಟಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ, ಗಡಿ ನಿರ್ವಹಣೆ ಕುರಿತ ವಿಚಾರಗಳ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.