
ಪಿಟಿಐ
ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ
ಬಿಜೀಂಗ್: ಮುಂದಿನ ವಾರ ಶ್ರೀಲಂಕಾದ ಪ್ರಧಾನಿ ದಿನೇಶ್ ಗುಣವರ್ಧನಾ ಅವರು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಚೀನಾ ವಿದೇಶಾಂಗ ಸಚಿವಾಲಯ ಈ ವಿಷಯವನ್ನು ಖಚಿತಪಡಿಸಿದೆ.
ಮಾರ್ಚ್ 25 ರಿಂದ 30ರ ಮಧ್ಯೆ ದಿನೇಶ್ ಅವರು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ ಸ್ಟೇಟ್ ಕೌನ್ಸಿಲ್ ಆಹ್ವಾನದ ಮೇರೆಗೆ ದಿನೇಶ್ ಗುಣವರ್ಧನಾ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಅಲ್ಲಿನ ವಿದೇಶಾಂಗ ಇಲಾಖೆಯ ವಕ್ತಾರ ಲಿನ್ ಜಿಯಾನ್ ತಿಳಿಸಿದ್ದಾರೆ.
ಚೀನಾ ದೇಶವು ಶ್ರೀಲಂಕಾಕ್ಕೆ ಸಾಲ ನೀಡುವಲ್ಲಿ ಮುಂಚೂಣಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.