ಬೀಜಿಂಗ್: ಹೋಸ್ಟನ್‌ನಲ್ಲಿರುವ ರಾಯಭಾರ ಕಚೇರಿಯನ್ನು ಮುಚ್ಚುವಂತೆ ಅಮೆರಿಕ ಆದೇಶಿಸಿದೆ ಎಂದು ಚೀನಾ ಬುಧವಾರ ಹೇಳಿದೆ.
ಟೆಕ್ಸಾಸ್‌ನಲ್ಲೂಕಚೇರಿ ಮುಚ್ಚಲು ಮೂರು ಗಡುವು ನೀಡಿದ ಹಿನ್ನೆಲೆಯಲ್ಲಿಯೇ ಮತ್ತೊಂದು ನಿರ್ದೇಶನ ನೀಡಿದ್ದು, ಇದು ಆ ದೇಶದ ಪ್ರತಿಕಾರದ ಮನೋಭಾವವನ್ನು ತೋರಿಸುತ್ತದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಖಂಡಿಸಿದೆ.
ಕೊರೊನಾ ವೈರಸ್ ಚೀನಾದ ವುಹಾನ್‌ನಲ್ಲಿ ಕಾಣಿಸಿಕೊಂಡಾಗಿನಿಂದಲೂ ಅಮೆರಿಕ– ಚೀನಾ ಸಂಬಂಧ ಹದಗೆಟ್ಟಿದೆ. ಎರಡು ದೇಶಗಳು ಆರೋಪ–ಪ್ರತ್ಯಾರೋಪದಲ್ಲಿ ತೊಡಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.