ADVERTISEMENT

ಗಡಿ ಸಂಘರ್ಷ: ಭಾರತದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ ಚೀನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜೂನ್ 2020, 11:13 IST
Last Updated 16 ಜೂನ್ 2020, 11:13 IST
ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್
ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್   

ಬೀಜಿಂಗ್: ಲಡಾಖ್‌ನ ಪೂರ್ವಭಾಗದ ಗಲ್ವಾನ್‌ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ಸೇನಾ ಸಂಘರ್ಷಕ್ಕೆ ಸಂಬಂಧಿಸಿ ಭಾರತದ ವಿರುದ್ಧ ಚೀನಾ ಪ್ರತಿಭಟನೆ ವ್ಯಕ್ತಪಡಿಸಿದೆ.

ಗಡಿ ಸಂಘರ್ಷದ ಕುರಿತು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಗಡಿಯಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಚೀನಾ–ಭಾರತದ ರಾಜತಾಂತ್ರಿಕರು ಮತ್ತು ಸೇನಾ ಕಮಾಂಡರ್‌ಗಳ ಮಟ್ಟದ ಮಾತುಕತೆ ಜೂನ್‌ 6ರಂದು ನಡೆದಿತ್ತು. ಆ ವೇಳೆ ಉಭಯ ರಾಷ್ಟ್ರಗಳು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಒಮ್ಮತಕ್ಕೆ ಬಂದಿದ್ದವು. ಆದರೆ ಸೋಮವಾರ ರಾತ್ರಿ ದಾಳಿ ಮಾಡುವ ಮೂಲಕ ಭಾರತೀಯ ಸೇನೆಯು ಆ ಮಾತುಕತೆಯ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಝಾವೊ ಲಿಜಿಯನ್ ಹೇಳಿದ್ದಾಗಿ ಚೀನಾ ಮಧ್ಯಮ ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.

ನಾವು ಭಾರತಕ್ಕೆ ಪ್ರತಿಭಟನೆ ಸಲ್ಲಿಸಿದ್ದೇವೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆ ವೇಳೆ ಮೂಡಿದ್ದ ಒಮ್ಮತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಸೂಚಿಸಿದ್ದೇವೆ. ಗಡಿ ದಾಟಬಾರದು ಹಾಗೂ ಪರಿಸ್ಥಿತಿ ವಿಷಮಗೊಳಿಸುವ ಯಾವುದೇ ಹೆಜ್ಜೆ ಇಡಬಾರದೆಂದು ತಿಳಿಸಿದ್ದೇವೆ ಎಂದು ಲಿಜಿಯನ್ ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.