
ಪ್ರಾತಿನಿಧಿಕ ಚಿತ್ರ
ಕೃಪೆ: ಎಐ
ಬೀಜಿಂಗ್: ಚೀನಾದ ಬಾಟೌ ನಗರದಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವಿಗೀಡಾಗಿದ್ದು, 66 ಜನರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಐದು ಜನರು ಕಾಣೆಯಾಗಿದ್ದಾರೆ.
ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ, ಚೀನಾದ ಮಂಗೋಲಿಯಾ ಸ್ವಾಯತ್ತ ಪ್ರದೇಶವಾಗಿರುವ ಬಾಟೌ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ‘ಭೂಮಿ ಕಂಪಿಸಿದ’ ಅನುಭವವಾಗಿದೆ ಎಂದು ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ.
ಸ್ಫೋಟಕ್ಕೆ ಕಾರಣ ಏನೆಂದು ತನಿಖೆ ಬಳಿಕವಷ್ಟೆ ತಿಳಿದು ಬರಲಿದೆ ಎಂದು ವರದಿ ತಿಳಿಸಿದೆ.
ಘಟನೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಸ್ಫೋಟದ ರಭಸಕ್ಕೆ ಬೆಂಕಿಯ ಜ್ವಾಲೆ ಉಂಟಾಗಿದೆ. ಆ ಜ್ವಾಲೆ ಇಡೀ ಕಾರ್ಖಾನೆಯನ್ನು ಆವರಿಸಿರುವುದನ್ನು ಕಾಣಬಹುದು.
ಗಾಯಗೊಂಡಿರುವ 66 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.