
ಕಠ್ಮಂಡು: ರುಸುವಾ ಜಿಲ್ಲೆಯಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಿಂದ ಹಾನಿಗೊಳಗಾಗಿರುವ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಮತ್ತು ಸುಂಕ ಸಂಬಂಧಿತ ಕಾರ್ಯಾಚರಣೆಗಳನ್ನು ಮರುಸ್ಥಾಪಿಸಲು ನೇಪಾಳಕ್ಕೆ ಬೆಂಬಲ ನೀಡುವುದಾಗಿ ಚೀನಾ ಭರವಸೆ ನೀಡಿದೆ.
ನೇಪಾಳದ ಹಣಕಾಸು ಸಚಿವ ಬಿಷ್ಣು ಪೌಡೆಲ್ ಹಾಗೂ ಚೀನಾದ ಅಂತರರಾಷ್ಟ್ರೀಯ ಸಹಕಾರ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಚೆನ್ ಷಿಯೋಡಾಂಗ್ ಅವರ ನೇತೃತ್ವದ ನಿಯೋಗ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ.
ಚೀನಾ–ನೇಪಾಳ ದ್ವಿಪಕ್ಷೀಯ ಸಂಬಂಧಗಳು, ಭವಿಷ್ಯದಲ್ಲಿ ಚೀನಾ ಅನುದಾನಿತ ಯೋಜನೆಗಳು ಹಾಗೂ ಅಭಿವೃದ್ಧಿಗೆ ಪರಸ್ಪರ ಸಹಕಾರ ಸೇರಿದಂತೆ ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಆಸ್ಪತ್ರೆಯ ವಿಸ್ತರಣೆ ಸೇರಿದಂತೆ ಒಟ್ಟು ನಾಲ್ಕು ಯೋಜನೆಗಳಿಗೆ ಸಭೆಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಮೂಲಸೌಕರ್ಯ ಪುನರ್‌ನಿರ್ಮಾಣಕ್ಕೆ ಸಹಕಾರ ನೀಡುತ್ತಿರುವ ಚೀನಾಕ್ಕೆ ಪೌಡೆಲ್ ಕೃತಜ್ಞತೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.